ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್’ (ಜಂತೊಟ್ಟು ಸಿನ್ಸ್ 1983) ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗದಲ್ಲಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಕಿರಿಯರು, ಹೊಸಬರು ಸಿನಿಮಾ ರಂಗದಲ್ಲಿ ಮಿಂಚುತ್ತಿದ್ದಾರೆ. ಯುವ ಪ್ರತಿಭಾವಂತರು ಸಿನಿಮಾರಂಗದಲ್ಲಿ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಚೆನ್ನಾಗಿ ಆಡಲಿ ಎಂದರು. ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ಗಜಾನನ ಕ್ರಿಕೆಟರ್ಸ್ ಸಿನಿಮಾದ ಪ್ರೀಮಿಯರ್ ಶೋಗಳನ್ನು ಪ್ರೇಕ್ಷಕರು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ರೋಹನ್ ಪಿರೇರ, ಸಂತೋಷ್ ಲಾಡ್ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು. ಉದ್ಯಮಿ ಮೈಕಲ್ ಡಿ ಸೋಜ ಶುಭ ಹಾರೈಸಿದರು.

