ಚಿಕ್ಕಬಳ್ಳಾಪುರ: ತಾಲೂಕಿನ ಗಂಗರೇಕಾಲುವೆ ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಗ್ರಹ ಪ್ರತಿಷ್ಠಾಪನೆ, ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

