Author: admin
Navy Recruitment– 2025: ಭಾರತೀಯ ನೌಕಾಪಡೆಯು ಹಲವಾರು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 286 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸರ್ಕಾರಿ ಕೆಲಸದ ಹುಡುಕಾಟದಲ್ಲಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. 2026ನೇ ಸಾಲಿನ ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಸುಮಾರು 22,000 ಗ್ರೂಪ್ ಡಿ (Group D — Level 1) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
ಕಾರವಾರ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಸ್‌ಎಸ್‌ಎಲ್‌ಸಿ (SSLC) ಪಾಸಾದ ಅಭ್ಯರ್ಥಿಗಳಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯವು ಸಿಹಿ ಸುದ್ದಿ ನೀಡಿದೆ. ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವ್ಯಾಪ್ತಿಯಲ್ಲಿ ಖಾಲಿ ಇರುವ ಜವಾನ (Peon) ಹಾಗೂ ಆದೇಶ ಜಾರಿಕಾರ (Process Server) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಂಧ್ರಪ್ರದೇಶ ರಾಜ್ಯದಲ್ಲಿ ಮತ್ತೊಂದು ಹೊಸ ರೈಲ್ವೆ ಜಂಕ್ಷನ್ ಸಿಗಲಿದೆ. ಇದು ಕುಪ್ಪಂ ರೈಲ್ವೆ ಜಂಕ್ಷನ್ ಆಗಲಿದ್ದು ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎನ್ನುತ್ತಾರೆ. ಕರ್ನಾಟಕದ ಮಾರಿಕುಪ್ಪಂ ನಿಂದ ಚಿತ್ತೂರು ಜಿಲ್ಲೆಯ ಕುಪ್ಪಂ ವರೆಗೆ ಹೊಸ ರೈಲ್ವೆ ಹಳಿ ಹಾಕಲಾಗುತ್ತಿರುವುದಾಗಿ ತಿಳಿದುಬಂದಿದೆ. ರೈಲ್ವೆ ಅಧಿಕಾರಿಗಳು ಈ ಕಾಮಗಾರಿಗಳ ವೇಗವನ್ನು ಹೆಚ್ಚಿಸಿದ್ದು ಪ್ರಸ್ತುತ ಈ ಮಾರ್ಗದಲ್ಲಿ ಕೆಲಸ ನಡೆಯುತ್ತಿದೆ. ಕರ್ನಾಟಕದ ಗಡಿಯಿಂದ ಆಂಧ್ರಪ್ರದೇಶ ಗಡಿಯವರೆಗಿನ ಕೆಲಸ ನಡೆಯುತ್ತಿದ್ದು ಶೇ. 90 ರಷ್ಟು ಈಗಾಗಲೇ ಪೂರ್ಣಗೊಂಡಿದೆ. ಅಲ್ಲದೆ, ಬಿಸನತ್ತಂ ನಿಂದ ಕುಪ್ಪಂ ವರೆಗಿನ 18 ಕಿಲೋಮೀಟರ್ ಪ್ರದೇಶದ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು. ಇದಕ್ಕಾಗಿ 269 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಹೊಸ ರೈಲು ಮಾರ್ಗ ನಿರ್ಮಾಣಕ್ಕಾಗಿ ಅಂದಾಜು ರೂ. 363 ಕೋಟಿ ವೆಚ್ಚದಲ್ಲಿ ಕೆಲಸ ನಡೆಯುತ್ತಿದೆ. ಮಾರ್ಚ್ 2028 ರೊಳಗೆ ಕೆಲಸವನ್ನು ಪೂರ್ಣಗೊಳಿಸುವ ಗುರಿಯನ್ನು ಅಧಿಕಾರಿಗಳು ಹೊಂದಿದ್ದಾರೆ.
ಶ್ರೀನಿವಾಸಪುರ: ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಾಗಿ (MANAGER) ಶ್ರೀನಿವಾಸಪುರ ಶಾಖೆಯಲ್ಲಿ ಕಾರ್ಯನಿರ್ವಹಿಸಿ, ವರ್ಗಾವಣೆಯಾಗಿರುವ ಪಿ. ಭರತ್ ಕುಮಾರ್ ರೆಡ್ಡಿ ಅವರಿಗೆ ಬ್ಯಾಂಕ್ ಸಿಬ್ಬಂದಿ, ಗ್ರಾಹಕರು ಹಾಗೂ ಹಿತೈಷಿಗಳ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ತಮ್ಮ ಕರ್ತವ್ಯನಿಷ್ಠೆ, ಸರಳ ನಡೆ, ಗ್ರಾಹಕರೊಂದಿಗೆ ಆತ್ಮೀಯವಾಗಿ ಬೆರೆಯುವ ಗುಣ ಹಾಗೂ ಸಮಾಜಮುಖಿ ಚಿಂತನೆಯ ಮೂಲಕ ಬ್ಯಾಂಕ್‌ನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಬ್ಯಾಂಕ್‌ಗೆ ಬರುವ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹರಿಸಲು ಅವರು ಪ್ರಯತ್ನಿಸುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು: ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿಯ ರಾಜ್ಯವನ್ನಾಗಿ ರೂಪಿಸುವ ಉದ್ದೇಶದಿಂದ, ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ನಗರದ **ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ನಡೆದ ಗೂಗಲ್ ಐ/ಒ ಕನೆಕ್ಟ್ ಇಂಡಿಯಾ–2026ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಐ ತಂತ್ರಜ್ಞಾನವನ್ನು ಆಡಳಿತ, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಾರ್ವಜನಿಕ ಸೇವೆಗಳೊಂದಿಗೆ ಸಮಗ್ರವಾಗಿ ಜೋಡಿಸುವ ಮಹತ್ವಾಕಾಂಕ್ಷೆಯ ಯೋಜನೆ ರೂಪಿಸಿದೆ ಎಂದು ತಿಳಿಸಿದರು.
ಇಂಜಿನಿಯರ್ ಅಥವಾ ಡಾಕ್ಟರ್ ಆಗುವ ಕನಸು ಕಾಣುವ ಇಂದಿನ ಯುವ ಸಮುದಾಯಕ್ಕೆ ಸವಾಲು ಎನ್ನುವಂತೆ ಈ ಯುವಕ ತನ್ನ 15ನೇ ವಯಸ್ಸಿಗೆ ಹೈನುಗಾರಿಕೆ ಆರಂಭಿಸಿದ್ದಾನೆ ಈಗ ಅವನಿಗೆ 18 ವರ್ಷ ವಯಸ್ಸು ಅಂದು ತಾನು ಆಯ್ಕೆ ಮಾಡಿಕೊಂಡಿದ್ದ ಹೈನುಗಾರಿಕೆ ವ್ಯವಹಾರ ಇಂದು ತಿಂಗಳಿಗೆ 5 ರಿಂದ 6 ಲಕ್ಷ ರೂಪಾಯಿ ದುಡಿಯುತ್ತಿದೆ.ಅದನ್ನು ಸಕಾರ ಗೊಳಿಸಿ ಯಶಸ್ವಿಯಾದ ಯುವಕ ಪಂಜಾಬ್‌ನ ಸೋಹಲ್‌ಪ್ರೀತ್ ಸಿಂಗ್ ಸಿಧು. ಇಂದಿನ ಯುವ ಸಮುದಾಯ what next ಮುಂದೇನು ಎಂಬ ಪ್ರಶ್ನೆಯೊಂದಿಗೆ ಹಲವಾರು ಕನಸುಗಳನ್ನು ಕಟ್ಟಿಕೊಳ್ಳುತ್ತಾರೆ. ಇನ್ನೂ ಕೆಲವರು ವಿದೇಶದಲ್ಲಿ ವ್ಯಾಸಾಂಗ ಮಾಡಿ ಅಲ್ಲೆ ಉದ್ಯೋಗ ಆರಸಿಕೊಳ್ಳುವ ಆಲೋಚನೆಯಲ್ಲಿ ಇರುತ್ತಾರೆ ಪಂಜಾಬ್‌ನ ಈ ಯುವಕ ಯಾವ ಐಟಿ ಬಿಟಿಗೂ ಕಡಿಮೆ ಇಲ್ಲದಂತೆ ಹಸು ಹಾಗು ಎಮ್ಮೆ ಸಾಕಾಣಿಕೆಯಿಂದ ಪ್ರತಿ ತಿಂಗಳು 5 ರಿಂದ 6 ಲಕ್ಷ ರೂಪಾಯಿಗಳನ್ನು ಗಳಿಸುತ್ತಿದ್ದಾನೆ. ತನ್ನ 15 ನೇ ವಯಸ್ಸಲ್ಲಿ ಓಂದು ಜಾನವಾರದೊಂದಿಗೆ ಡೈರಿ ಫಾರ್ಮ್ ಆರಂಭಿಸಿದ ಸಿದ್ದು ಅದರಿಂದ ಬಂದ ಪ್ರತಿ ರೂಪಾಯಿಯನ್ನು…
ತೋತಾಪುರಿ ಮಾವಿನ ಬೆಲೆ ತೀವ್ರ ಕುಸಿತದಿಂದ ಸಂಕಷ್ಟಕ್ಕೆ ಈಡಾಗಿದ್ದ ಆಂಧ್ರದ ರೈತರು ಮೂಲತಃ ಚಿತ್ತೂರು ಜಿಲ್ಲೆಯವರಾದ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದರು.ಸ್ವಂತ ಜಿಲ್ಲೆಯ ಮಾವು ಬೆಳೆಗಾರರನ್ನು ಕಾಪಾಡುವಂತೆ ಪ್ರತಿ ಕೆಜಿಗೆ 12 ರೂಪಾಯಿಂದ 16 ರೂಪಾಯಿ ಬೆಂಬಲ ಬೆಲೆ ನೀಡುವಂತೆ ಅಗ್ರಹಿಸಿದ್ದರು. ಇದಕ್ಕೆ ಸ್ಪಂದಿಸಿರುವ ಆಂಧ್ರ ಸರ್ಕಾರ ತೋತಾಪುರಿ ಮಾವಿನಕಾಯಿಗೆ ಕೆಜಿಗೆ 4 ರೂ. ಬೆಂಬಲ ಬೆಲೆ ಘೋಷಿಸಿದೆ. ಸಾವಿರಾರು ಮಾವಿನ ರೈತರಿಗೆ ಅಲ್ಪ ಪಟ್ಟದ ಪರಿಹಾರ ಸಿಕ್ಕಂತಾಗಿದೆ ಮಾವಿನಕಾಯಿ ಕೊಯ್ಲು ನಡೆಯುತ್ತಿದ್ದು ಬೆಳೆಗಾರರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವಲ್ಲಿ ಸರ್ಕಾರದ ನಿರ್ಧಾರ ನಿರ್ಣಾಯಕವಾಗಲಿದೆ ಎಂದು ಬೆಳೆಗಾರರು ಹೇಳುತ್ತಾರೆ.
ಶ್ರೀನಿವಾಸಪುರ:ರಾಜ್ಯ ಲೋಕಾಯುಕ್ತ ಜಿಲ್ಲಾಡಳಿತ ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ಶ್ರೀನಿವಾಸಪುರ-ಹೊಗಳಗೆರೆ ರಸ್ತೆಯ ಮಜರಾ ಚಿಂತಕುಂಟ ಅರಣ್ಯ ಪ್ರದೇಶದಲ್ಲಿ ವನಮಹೋತ್ಸವಕ್ಕೆ ಗಿಡ ನೆಡುವ ಮೂಲಕ ಕರ್ನಾಟಕ ಉಪ ಲೋಕಾಯುಕ್ತಾ ನ್ಯಾಯಮೂರ್ತಿ ಬಿ.ವೀರಪ್ಪ ಇಂದು ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತಾ ನ್ಯಾಯಮೂರ್ತಿ ಬಿ.ವೀರಪ್ಪ ಅರಣ್ಯ ಎಂದರೆ ಕೇವಲ ಮರಗಳ ಸಮೂಹವಲ್ಲ, ಪ್ರಕೃತಿಯ ಸಂಪತ್ತು ಅದನ್ನು ಮಕ್ಕಳ ರೀತಿಯಲ್ಲಿ ಪೋಷಿಸುವ ಮೂಲಕ ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ ಮಾಡಬೇಕಿದೆ.ಇದರಿಂದ ಜೀವಸಂಕುಲದ ಉಳಿವು ಹಾಗು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಅರಣ್ಯ ಸಂಪತ್ತನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
