ಮಂಗಳೂರು: ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟ ಲಿಖಿತ್ ಶೆಟ್ಟಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು.
ಪುತ್ತೂರು, ಆ.1: ಪುತ್ತೂರು-ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿ, ವನಸುಮ ನರ್ಸರಿ ಸಮೀಪ ನಿರ್ಮಾಣವಾಗಿರುವ ದೊಡ್ಡ ಹಾಗೂ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಭಾಗದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಉಂಟಾಗಿರುವ ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಗೆ ಪುತ್ತಿಲ ಪರಿವಾರ ಸಂಘಟನೆ ಆಗ್ರಹಿಸಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಜು.30 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.
ಬೆಂಗಳೂರು: ದಿನಾಂಕ 03-08-2026 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನ URU Whitefield, ಪಟ್ಟಂದೂರು ಅಗ್ರಹಾರದಲ್ಲಿ ಆಯೋಜಿಸಲಾಗಿರುವ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರ ಕಾರ್ಯಕ್ರಮವನ್ನು ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಹಾಗೂ ಧಾರ್ಮಿಕ ಸಾಮರಸ್ಯದ ಹಿತದೃಷ್ಟಿಯಿಂದ ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ, ಬೆಂಗಳೂರು ವತಿಯಿಂದ ವೈಟ್‌ಫೀಲ್ಡ್ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.